×
Ad

ಬಾಂಗ್ಲಾದಲ್ಲಿ ವಿದ್ಯಾರ್ಥಿ ದಂಗೆ ಪ್ರಕರಣ: ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದ ಐಟಿಸಿ

Update: 2025-11-17 14:37 IST

ಶೇಖ್ ಹಸೀನಾ (Photo: PTI)

ಢಾಕಾ, ನ.17: ಕಳೆದ ವರ್ಷದ ವಿದ್ಯಾರ್ಥಿ ದಂಗೆ ವೇಳೆ ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ಎಸಗಿದ ಆರೋಪದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) ಸೋಮವಾರ ಮರಣದಂಡನೆ ವಿಧಿಸಿದೆ.

ದೇಶದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಈ ತೀರ್ಪು ಬಾಂಗ್ಲಾದೇಶದ ಇತ್ತೀಚಿನ ಇತಿಹಾಸದಲ್ಲೇ ಪ್ರಮುಖ ಬೆಳವಣಿಗೆಯಾಗಿದೆ.

ಐಸಿಟಿ ನೀಡಿರುವ ವರದಿ ಪ್ರಕಾರ, 2024ರ ಜುಲೈನಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಸರ್ಕಾರ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಸೀನಾ ಸರ್ಕಾರವು ಭದ್ರತಾ ಪಡೆಗಳಿಗೆ ಅತಿಯಾದ ಬಲಪ್ರಯೋಗಕ್ಕೆ ಅನುಮತಿ ನೀಡಿರುವುದು ದಾಖಲಾಗಿದೆ. ಈ ಕ್ರಮದಲ್ಲಿ ಅನೇಕ ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು.

ಪ್ರತಿಭಟನೆಗಳ ದಮನದ ಕ್ರಮ ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ದಂಗೆಯ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ಕೈಗೊಂಡಿದ್ದ ಐಸಿಟಿ ಹಲವು ತಿಂಗಳ ವಿಚಾರಣೆಯ ನಂತರ ಇಂದು ಅಂತಿಮ ತೀರ್ಪು ಪ್ರಕಟಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News