×
Ad

ಪಪುವಾ ನ್ಯೂಗಿನಿಯಲ್ಲಿ ಭೀಕರ ಭೂಕುಸಿತ: 2 ಸಾವಿರಕ್ಕೂ ಅಧಿಕ ಮಂದಿ ಸಾವು

Update: 2024-05-27 12:55 IST

Photo: PTI

ಪಪುವಾ ನ್ಯೂಗಿನಿ: ದೇಶದ ಉತ್ತರ ಭಾಗದಲ್ಲಿರುವ ದೂರದ ಹಳ್ಳಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ 2,000 ಕ್ಕೂ ಹೆಚ್ಚು ಜನರು ಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿ ರಾಷ್ಟ್ರೀಯ ವಿಪತ್ತು ಕೇಂದ್ರ ತಿಳಿಸಿದೆ.

"ಭೂಕುಸಿತವು 2,000 ಕ್ಕೂ ಹೆಚ್ಚು ಜನರನ್ನು ಜೀವಂತವಾಗಿ ಸಮಾಧಿ ಮಾಡಿದ್ದು, ಕಟ್ಟಡಗಳು, ಆಹಾರ ತೋಟಗಳು ವ್ಯಾಪಕ ನಾಶಕ್ಕೆ ಗುರಿಯಾಗಿದೆ. ಈ ದುರ್ಘಟನೆಯಿಂದಾಗಿ ದೇಶದ ಆರ್ಥಿಕ ಜೀವನಾಧಾರದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ" ಎಂದು ರಾಷ್ಟ್ರೀಯ ವಿಪತ್ತು ಕೇಂದ್ರದ ಅಧಿಕಾರಿಯೊಬ್ಬರು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News