×
Ad

ಪಾಕ್ | ನ್ಯಾಯಾಧೀಶರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ; ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ

Update: 2024-08-02 23:17 IST

ಸಾಂದರ್ಭಿಕ ಚಿತ್ರ  

 

ಇಸ್ಲಾಮಾಬಾದ್ : ವಾಯವ್ಯ ಪಾಕಿಸ್ತಾನದಲ್ಲಿ ಮೂವರು ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಬೆಂಗಾವಲಾಗಿದ್ದ ಪೊಸೀಸ್ ಅಧಿಕಾರಿಗಳ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನದಾಳಿ ನಡೆಸಿ ಇಬ್ಬರನ್ನು ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಮೂವರು ನ್ಯಾಯಾಧೀಶರು ಅದೃಷ್ಟವಶಾತ್ ಪಾರಾಗಿದ್ದಾರೆ. ಒಂದು ವಾರದಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೆ ದಾಳಿ ಇದಾಗಿದೆ.

ಖೈಬರ್‌ಪಖ್ತೂನ್‌ಖ್ವಾ ಜಿಲ್ಲೆಯ ದೇರಾ ಇಸ್ಮಾಯೀಲ್ ಖಾನ್ ನಗರದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಕೆಲವೇ ದಿನಗಳ ಮೊದಲು ಇಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ಬಂದೂಕುಧಾರಿಗಳು ವಿಶ್ವಸಂಸ್ಥೆಯ ಸಿಬ್ಬಂದಿಯನ್ನು ಒಯ್ಯುತ್ತಿದ್ದ ಬುಲೆಟ್‌ಪ್ರೂಫ್ ವಾಹನದ ಮೇಲೆ ದಾಳಿ ನಡೆಸಿದ್ದರು. ಆದರೆ ಯಾವುದೇ ಸಾವುನೋವು ಸಂಭವಿಸಿರಲಿಲ್ಲ.

ಎರಡೂ ದಾಳಿಗಳ ಹೊಣೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ.ಇತ್ತೀಚಿನ ತಿಂಗಳುಗಳಲ್ಲಿ ವಾಯವ್ಯ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳಲ್ಲಿ ಭಾರೀ ಹೆಚ್ಚಳವಾಗಿದೆ. ಅಫ್ಘಾನಿಸ್ತಾನದ ತಾಲಿಬಾನ್ ಜೊತೆಗೆ ಗುರುತಿಸಿಕೊಂಡಿರುವ ತೆಹ್ರಿಕೆ ತಾಲಿಬಾನ್ ಪಾಕಿಸ್ತಾನ

ಈ ವಿಧ್ವಂಸಕ ಕೃತ್ಯಗಳ ಹಿಂದಿರುವುದಾಗಿ ಪಾಕ್ ಅಧಿಕಾರಿಗಳು ಆಪಾದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News