×
Ad

ಪಾಕಿಸ್ತಾನ | ಬಸ್ ಕಮರಿಗೆ ಉರುಳಿ 20 ಮಂದಿ ಸಾವು

Update: 2024-05-03 22:37 IST

ಇಸ್ಲಾಮಾಬಾದ್ : ಶುಕ್ರವಾರ ವಾಯವ್ಯ ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ಸೊಂದು ಪರ್ವತ ಪ್ರದೇಶದಿಂದ ಸ್ಕಿಡ್ ಆಗಿ ಕಮರಿಗೆ ಉರುಳಿಬಿದ್ದು ಕನಿಷ್ಠ 20 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ರಾವಲ್ಪಿಂಡಿಯಿಂದ ಹಂಝಾಕ್ಕೆ ಪ್ರಯಾಣಿಸುತ್ತಿದ್ದ ಬಸ್‍ನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದು ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದು ಇತರ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿಯಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News