ಸಾಂದರ್ಭಿಕ ಚಿತ್ರ

ಪೇಷಾವರ: ಪಾಕಿಸ್ತಾನದ ಸೇನಾ ಪಡೆಯ ವಾಹನಗಳ ಮೇಲೆ ಶುಕ್ರವಾರ ನಡೆದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ದಾಳಿಯಲ್ಲಿ ಆರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಗುರುವಾರ ರಾತ್ರಿ ಭದ್ರತಾ ಪಡೆಯ ವಾಹನಗಳ ಸಾಲನ್ನು ಗುರಿಯಾಗಿಸಿ ನಡೆದ ಐಇಡಿ ದಾಳಿಯು ಆರು ಸಿಬ್ಬಂದಿಯನ್ನು ಬಲಿ ತೆಗೆದುಕೊಂಡಿದ್ದು ಕೆಲವರು ಗಾಯಗೊಂಡಿದ್ದಾರೆ. ಈ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಲ್ಲ.

ಈ ಮಧ್ಯೆ, ಗುರುವಾರ ಉತ್ತರ ವಜೀರಿಸ್ತಾನ್ ಮತ್ತು ಹಂಗುವಿನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ತನ್ನ ಪಡೆಗಳು 10 ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor