×
Ad

ಪಾಕಿಸ್ತಾನ | ಜನಾಂಗೀಯ ಹಿಂಸಾಚಾರಕ್ಕೆ 37 ಮಂದಿ ಬಲಿ

Update: 2024-11-23 21:51 IST

ಸಾಂದರ್ಭಿಕ ಚಿತ್ರ | PC : PTI

ಪೇಷಾವರ : ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಬುಡಕಟ್ಟುಗಳ ನಡುವೆ ನಡೆದ ಘರ್ಷಣೆಯಲ್ಲಿ 37 ಮಂದಿ ಹತರಾಗಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾದ ಪರಾಚಿನಾರ್ ನಗರದಲ್ಲಿ ಗುರುವಾರ ಹಲವು ವಾಹನಗಳ ಮೇಲೆ ಗುಂಡಿನ ದಾಳಿ ನಡೆದಿದ್ದು 47 ಮಂದಿ ಸಾವನ್ನಪ್ಪಿದ್ದರು. ಬಳಿಕ ಕುರ್ರಮ್ ಜಿಲ್ಲೆಯಲ್ಲಿ ಅಲಿಜೈ ಮತ್ತು ಬಗಾನ್ ಬುಡಕಟ್ಟುಗಳ ನಡುವೆ ಜನಾಂಗೀಯ ಹಿಂಸೆ ಭುಗಿಲೆದ್ದಿದೆ. ಹಲವಾರು ಮನೆಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ಪಲಾಯನ ಮಾಡಿದ್ದಾರೆ ಪರಿಸ್ಥಿತಿಯನ್ನು ನಿಯಂತ್ರಿಸಲು ಖೈಬರ್ ಪಖ್ತೂಂಕ್ವಾದ ಕಾನೂನು ಸಚಿವ, ಸರಕಾರದ ಮುಖ್ಯ ಕಾರ್ಯದರ್ಶಿ ಐಜಿಪಿ ಹಾಗೂ ಪೊಲೀಸರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ರವಾನಿಸಲಾಗಿದೆ ಎಂದು ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News