×
Ad

Pakistan ವಾಯುಪಡೆಯ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ ಗಳು ಮೃತ್ಯು

Update: 2026-06-15 23:00 IST

ಸಾಂದರ್ಭಿಕ ಚಿತ್ರ | Photo Credit : NDTV

ಪೇಷಾವರ, ಜೂ.15: ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಮರ್ದಾನ್ ಬಳಿ ಸೋಮವಾರ ಪಾಕಿಸ್ತಾನ ವಾಯುಪಡೆಯ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರೂ ಪೈಲಟ್ಗಳು ಸಾವನ್ನಪ್ಪಿದ್ದಾರೆ.

ಈ ವಿಮಾನವು ಎಂದಿನಂತೆ ನಿಯಮಿತ ತರಬೇತಿ ಹಾರಾಟದಲ್ಲಿದ್ದಾಗ ಪತನಗೊಂಡಿದೆ. ಮೃತರನ್ನು ಪಾಕಿಸ್ತಾನ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ಮುಹಮ್ಮದ್ ಖಾಸಿಮ್ ಅಬ್ದುಲ್ಲಾ ಮತ್ತು ಪಾಕಿಸ್ತಾನ ನೌಕಾಪಡೆಯ ಲೆಫ್ಟಿನೆಂಟ್ ತಾಹಾ ಅಬ್ಬಾಸಿ ಎಂದು ಗುರುತಿಸಲಾಗಿದೆ. ವಿಮಾನ ಪತನಗೊಂಡ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಮೀಪದ ಆಸ್ತಿಗಳಿಗೆ ಹಾನಿಯಾಗಿದೆ ಮತ್ತು ಮೂವರು ನಾಗರಿಕರು ಗಾಯಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News