ಪಾಕಿಸ್ತಾನ | ಪೊಲೀಸ್ ಚೌಕಿಯ ಮೇಲೆ ದಾಳಿ; 11 ಅಧಿಕಾರಿಗಳು ಮೃತ್ಯು

Update: 2026-07-30 21:25 IST

Photo Credit : AP 

ಪೇಷಾವರ, ಜು.30: ಅಫ್ಘಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ಖೈಬರ್ ಪಖ್ತುನ್‍ಖ್ವಾ ಪ್ರಾಂತದ ಹಂಗು ಜಿಲ್ಲೆಯಲ್ಲಿರುವ ಖಝೀನಾ ಪೊಲೀಸ್ ಚೌಕಿಯನ್ನು ಗುರಿಯಾಗಿಸಿಕೊಂಡು ಬುಧವಾರ ತಡರಾತ್ರಿ ನಡೆದ ದಾಳಿಯಲ್ಲಿ ಕನಿಷ್ಠ 11 ಅಧಿಕಾರಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಡ್ರೋನ್‍ಗಳಿಗೆ ಜೋಡಿಸಲಾಗಿದ್ದ ಸ್ಫೋಟಕ ಸಾಧನಗಳಿಂದ ಪೊಲೀಸ್ ಚೆಕ್‍ಪೋಸ್ಟ್ ಮೇಲೆ ದಾಳಿ ನಡೆಸಿದ ನಂತರ ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಭದ್ರತಾ ಪಡೆಗಳ ನೇತೃತ್ವ ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿ ದಿಯಾರ್ ಖಾನ್ ಕೂಡ ಮೃತಪಟ್ಟವರಲ್ಲಿ ಸೇರಿದ್ದಾರೆ . ದಾಳಿಯ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು 15 ಉಗ್ರರನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News