×
Ad

ಪಾಕ್ ಸ್ವಾತಂತ್ರ್ಯ ಸಂಭ್ರಮಾಚರಣೆ; ಗಾಳಿಯಲ್ಲಿ ಗುಂಡು ಹಾರಿಸಿದಾಗ ಮೂವರು ಮೃತ್ಯು

Update: 2025-08-14 23:18 IST

ಸಾಂದರ್ಭಿಕ ಚಿತ್ರ | PC : freepik.com

ಕರಾಚಿ, ಆ.14: ಪಾಕಿಸ್ತಾನದ ಕರಾಚಿಯಲ್ಲಿ ಗುಂಪೊಂದು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾತಂತ್ರ್ಯ ಸಂಭ್ರಮಾಚರಿಸುತ್ತಿದ್ದಾಗ 8 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದು 64 ಮಂದಿ ಗಾಯಗೊಂಡಿರುವುದಾಗಿ `ಜಿಯೊ ನ್ಯೂಸ್' ವರದಿ ಮಾಡಿದೆ.

ಕರಾಚಿಯ ವಿವಿಧೆಡೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಅಜಾಗರೂಕ ಮತ್ತು ಅಪಾಯಕಾರಿ ರೀತಿಯ ಗುಂಡು ಹಾರಾಟದಲ್ಲಿ ಮೂವರು ಸಾವನ್ನಪ್ಪಿದ್ದು ಕನಿಷ್ಠ 64 ಮಂದಿ ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ತನಿಖೆ ನಡೆಯುತ್ತಿದ್ದು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News