Photo Credit : X

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತದ ಥಾರ್‍ಪಾರ್ಕರ್ ಜಿಲ್ಲೆಯಲ್ಲಿ ಸರಕಾರಿ ಆರೋಗ್ಯ ಕೇಂದ್ರವೊಂದರಲ್ಲಿ ಬುಧವಾರ ರಾತ್ರಿ ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು ಗರ್ಭಿಣಿ ಮಹಿಳೆ ಸೇರಿದಂತೆ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಈ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡು ವಾಹನ ಸಂಪೂರ್ಣವಾಗಿ ಭಸ್ಮಗೊಂಡಿದೆ ಹಾಗೂ ಹಲವರು ಗಾಯಗೊಂಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಯನ್ನು ಬೇರೆಡೆಗೆ ಕರೆದೊಯ್ಯಲು ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಅಳವಡಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರಾದವರಲ್ಲಿ ಗರ್ಭಿಣಿ ಮಹಿಳೆ, ವೈದ್ಯಕೀಯ ಸಿಬ್ಬಂದಿ, ರೋಗಿಗಳು, ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ. ಆರೋಗ್ಯ ಕೇಂದ್ರದಲ್ಲಿದ್ದ ಇಬ್ಬರು ದಾದಿಯರು ಮತ್ತು ಒಬ್ಬ ಮಹಿಳಾ ಸಹಾಯಕಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor