ಪಾಕಿಸ್ತಾನ | ಇಬ್ಬರು ಪೊಲೀಸ್ ಅಧಿಕಾರಿಗಳ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರ (AI)
ಪೇಶಾವರ್: ವಾಯವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಮನೆ-ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡುವ ಅಭಿಯಾನದ ವೇಳೆ, ಲಸಿಕೆ ಸಿಬ್ಬಂದಿಗೆ ಭದ್ರತೆ ನೀಡುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬೈಕ್ನಲ್ಲಿ ಬಂದ ಶಂಕಿತ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತದ ಮೊಹ್ಮಂಡ್ ಜಿಲ್ಲೆಯಲ್ಲಿ ನಡೆದ ಈ ದಾಳಿಯಲ್ಲಿ ಒಬ್ಬ ಅಧಿಕಾರಿ ಗಾಯಗೊಂಡಿದ್ದು ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಸೋಮವಾರ ಖೈಬರ್ ಪಖ್ತುಂಖ್ವಾದ ಟ್ಯಾಂಕ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನಾಲ್ವರು ಪೋಲಿಯೋ ಕಾರ್ಯಕರ್ತರನ್ನು ಅಪಹರಿಸಿದ್ದಾರೆ ಎಂದು ಪ್ರಾದೇಶಿಕ ರಾಜ್ಯಪಾಲರು ಹೇಳಿಕೆಯಲ್ಲಿ ತಿಳಿಸಿದ್ದಾರೆ.