ಈಜಿಪ್ಟ್ ನ ಅತ್ಯುನ್ನತ ಸರಕಾರಿ ಗೌರವವಾದ 'ಆರ್ಡರ್ ಆಫ್ ದಿ ನೈಲ್' ಅನ್ನು ಸ್ವೀಕರಿಸಿದ ಪ್ರಧಾನಿ ಮೋದಿ
26 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಈಜಿಪ್ಟ್ ಗೆ ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ.
Update: 2023-06-25 16:07 IST
Photo: Twitter/PMOIndia
ಕೈರೊ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್-ಸಿಸಿ ಅವರಿಂದ ಈಜಿಪ್ಟ್ ನ ಅತ್ಯುನ್ನತ ಸರಕಾರಿ ಗೌರವವಾದ 'ಆರ್ಡರ್ ಆಫ್ ದಿ ನೈಲ್' ಅನ್ನು ಸ್ವೀಕರಿಸಿದರು.
ಇಂದು ಮುಂಜಾನೆ, ಪ್ರಧಾನಿ ಮೋದಿ ಈಜಿಪ್ಟ್ನ 11 ನೇ ಶತಮಾನದ ಐತಿಹಾಸಿಕ ಅಲ್-ಹಕೀಮ್ ಮಸೀದಿ ಹಾಗೂ ಕೈರೋದಲ್ಲಿನ ಹೆಲಿಯೊಪೊಲಿಸ್ ಕಾಮನ್ವೆಲ್ತ್ ಯುದ್ಧ ಸ್ಮಶಾನಕ್ಕೆ ಭೇಟಿ ನೀಡಿದರು. ಪ್ರಧಾನಿ ಮೋದಿ ಅವರು ಈಜಿಪ್ಟ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದರು.
26 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಈಜಿಪ್ಟ್ ಗೆ ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಈಜಿಪ್ಟ್ ಅನ್ನು ವಿಶೇಷ ಅತಿಥಿಯಾಗಿ ಆಹ್ವಾನಿಸಲಾಗಿರುವ ಜಿ-20 ಶೃಂಗಸಭೆಗಾಗಿ ಅಲ್-ಸಿಸಿ ಸೆಪ್ಟೆಂಬರ್ನಲ್ಲಿ ಭಾರತಕ್ಕೆ ಪ್ರಯಾಣಿಸಲಿದ್ದಾರೆ.