ಅಮೆರಿಕ ಮತ್ತು ಇರಾನ್ ಶಾಂತಿ ಒಪ್ಪಂದವನ್ನು ಸ್ವಾಗತಿಸಿದ ಪ್ರಧಾನಿ ಮೋದಿ
Update: 2026-06-15 23:30 IST
ನರೇಂದ್ರ ಮೋದಿ | Photo Credit: PTI
ಹೊಸದಿಲ್ಲಿ, ಜೂ. 15: ಪಶ್ಚಿಮ ಏಶ್ಯ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್ ಶಾಂತಿ ಒಪ್ಪಂದಕ್ಕೆ ಬಂದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಾಗತಿಸಿದ್ದಾರೆ.
‘‘ಪಶ್ಚಿಮ ಏಶ್ಯ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ಏರ್ಪಡಿಸಿಕೊಂಡಿರುವ ಶಾಂತಿ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಈ ಯುದ್ಧವು ಜಗತ್ತಿನಾದ್ಯಂತ ತೀವ್ರ ಆರ್ಥಿಕ ಸಂಕಷ್ಟಕ್ಕೆ ಮತ್ತು ಹಲವು ದೇಶಗಳಲ್ಲಿ ಪ್ರಾಣಹಾನಿಗೆ ಕಾರಣವಾಗಿತ್ತು’’ ಎಂದು ಸ್ಲೊವೇಕಿಯ ರಾಜಧಾನಿ ಬ್ರಟಿಸ್ಲವ ಪ್ರವಾಸದಲ್ಲಿರುವ ಮೋದಿ ‘ಎಕ್ಸ್’ನಲ್ಲಿ ಹಾಕಿದ ಸಂದೇಶವೊಂದರಲ್ಲಿ ಹೇಳಿದ್ದಾರೆ.