ಹಾರ್ವರ್ಡ್ ವಿವಿ: ಫೆಲೆಸ್ತೀನ್ ಧ್ವಜ ಹಾರಿಸಿ ಪ್ರತಿಭಟನೆ

Update: 2024-04-29 16:21 GMT

PC : X/@hzomlot

ವಾಷಿಂಗ್ಟನ್ : ಫೆಲೆಸ್ತೀನೀಯರನ್ನು ಬೆಂಬಲಿಸಿ ಅಮೆರಿಕದ ವಿಶ್ವವಿದ್ಯಾಲಯಗಳಾದ್ಯಂತ ಪ್ರತಿಭಟನೆ ಮುಂದುವರಿಯುತ್ತಿರುವ ಮಧ್ಯೆಯೇ, ಹಾರ್ವರ್ಡ್ ವಿವಿಯಲ್ಲಿ ವಿದ್ಯಾರ್ಥಿಯೊಬ್ಬ ಫೆಲೆಸ್ತೀನ್ ಧ್ವಜ ಹಾರಿಸಿರುವುದಾಗಿ ವರದಿಯಾಗಿದೆ.

ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾಲಯದ ಕಟ್ಟಡದ ಮುಂಭಾಗದಲ್ಲಿ ಅಮೆರಿಕದ ರಾಷ್ಟ್ರೀಯ ಧ್ವಜ ಹಾರಾಡಬೇಕಿದ್ದ ಸ್ಥಳದಲ್ಲಿ ಫೆಲೆಸ್ತೀನ್ ಧ್ವಜವನ್ನು ಹಾರಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ವ್ಯಾಪಕ ಖಂಡನೆ, ಟೀಕೆ, ಆಕ್ರೋಶ ವ್ಯಕ್ತವಾಗಿದೆ.

ಇದು ವಿವಿಯ ನಿಯಮಗಳ ಉಲ್ಲಂಘನೆಯಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳ ವಿರುದ್ಧ ಕಠಿಣ ಶಿಸ್ತುಕ್ರಮಕ್ಕೆ ಆದೇಶಿಸಲಾಗಿದೆ ಎಂದು ವಿವಿಯ ವಕ್ತಾರರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News