×
Ad

ಜಿ20 ಶೃಂಗಸಭೆಗೆ ಪುಟಿನ್ ಖುದ್ದು ಹಾಜರಾತಿಯಿಲ್ಲ: ವರದಿ

Update: 2023-08-25 22:02 IST

ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ Photo:PTI

ಮಾಸ್ಕೊ: ಸೆಪ್ಟಂಬರ್‍ನಲ್ಲಿ ಭಾರತದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ವೈಯಕ್ತಿಕವಾಗಿ ಪಾಲ್ಗೊಳ್ಳುವ ಯಾವುದೇ ಯೋಜನೆಯನ್ನು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೊಂದಿಲ್ಲ ಎಂದು ರಶ್ಯ ಅಧ್ಯಕ್ಷರ ಕಚೇರಿಯ ಹೇಳಿಕೆ ತಿಳಿಸಿದೆ.

ಉಕ್ರೇನ್‍ನಲ್ಲಿ ಯುದ್ಧಾಪರಾಧ ಎಸಗಿರುವ ಆರೋಪದಲ್ಲಿ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್(ಐಸಿಸಿ) ಪುಟಿನ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ. ವಿದೇಶಕ್ಕೆ ಪ್ರಯಾಣಿಸಿದರೆ ಅವರನ್ನು ಬಂಧಿಸಲು ಇದು ಅವಕಾಶ ನೀಡುತ್ತದೆ. ಈ ವಾರ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ `ಬ್ರಿಕ್ಸ್' ಶೃಂಗಸಭೆಯಲ್ಲಿ ಪುಟಿನ್ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News