×
Ad

ಅತ್ಯಾಚಾರ ಪ್ರಕರಣ: ಪಾಕ್ ಯುವ ಕ್ರಿಕೆಟಿಗ ಬ್ರಿಟನ್ ನಲ್ಲಿ ಬಂಧನ

Update: 2025-08-08 07:42 IST

ಪಾಕಿಸ್ತಾನ ಎ ತಂಡದ ಆಟಗಾರ ಯುವ ಕ್ರಿಕೆಟಗ ಹೈದರ್ ಅಲಿ ಅವರನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಅತ್ಯಾಚಾರ ಆರೋಪದಲ್ಲಿ ಬಂಧಿಸಿದ್ದಾರೆ. ಅಲಿ ವಿರುದ್ಧ ಯುವತಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಯುವ ಆಟಗಾರನನ್ನು ತಾತ್ಕಾಲಿಕವಾಗಿ ತಂಡದಿಂದ ಅಮಾನತು ಮಾಡಲಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಆಗಸ್ಟ್ 3ರಂದು ಎಂಸಿಎಸ್ಎಸಿ ತಂಡದ ವಿರುದ್ಧ ಪಾಕಿಸ್ತಾನ ಶಹೀನ್ಸ್ ತಂಡ ಆಡುತ್ತಿದ್ದ ವೇಳೆ ಬೆಕೆನ್ ಹ್ಯಾಮ್ ಮೈದಾನದಲ್ಲಿ ಮ್ಯಾಂಚೆಸ್ಟರ್ ಪೊಲೀಸರು ಹೈದರ್ ಅಲಿಯನ್ನು ಬಂಧಿಸಿದರು ಎಂದು ಟೆಲಿಕಾಂ ಏಷ್ಯಾ ಸ್ಪೋರ್ಟ್ಸ್ ವರದಿ ಮಾಡಿದೆ. "ಪಾಕಿಸ್ತಾನ ಮೂಲದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆಟಗಾರರನ್ನು ಬಂಧಿಸಲಾಗಿದೆ ಎಂದು ವರದಿಯು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿದೆ.

ಹೈದರ್ ಅಲಿ ಅವರ ಪಾಸ್‌ಪೋರ್ಟ್ ಅನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ವಶಪಡಿಸಿಕೊಂಡಿದ್ದರು. ಆದರೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದ್ದು, ಈ ಪ್ರಕರಣದಲ್ಲಿ ಹೈದರ್ ಗೆ ಅಗತ್ಯ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವವರೆಗೆ ಹೈದರ್ ಅಲಿಯವರನ್ನು ಅಮಾನತುಗೊಳಿಸಲಾಗಿದೆ ಎಂದು ಪಿಸಿಬಿ ವಿವರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News