Photo Credit : X

ರಿಯಾದ್, ಅ.10: ಯಮನ್‌ನ ಹೂತಿ ಗುಂಪಿನಿಂದ ಸೌದಿ ಅರೇಬಿಯಾ ಮೇಲಿನ ಕ್ಷಿಪಣಿ ದಾಳಿಗಳು ತೀವ್ರಗೊಂಡಿರುವ ನಡುವೆಯೇ, ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ಟೋಬರ್ 10ರಂದು ಜೋರಾದ ಸ್ಫೋಟದ ಶಬ್ದ ಕೇಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಈ ಮಧ್ಯೆ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ನೇರವಾಗಿ ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ವಿಮಾನದ ಸ್ಥಿತಿಗತಿಯನ್ನು ಪರಿಶೀಲಿಸುವಂತೆ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಕೋರಿದೆ. ಎತಿಹಾದ್ ಏರ್‌ವೇಸ್ ಮತ್ತು ಕತರ್ ಏರ್‌ವೇಸ್ ತಮ್ಮ ಕೇಂದ್ರ ನಿಲ್ದಾಣಗಳು ಮತ್ತು ರಿಯಾದ್ ನಡುವಿನ ಹಲವು ವಿಮಾನಗಳನ್ನು ರದ್ದುಗೊಳಿಸಿವೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor