×
Ad

Saudi Arabia | ಕಟ್ಟಡದ ಮೇಲೆ ಕ್ಷಿಪಣಿ ದಾಳಿ: ಇಬ್ಬರು ಮೃತ್ಯು, 12 ಮಂದಿಗೆ ಗಾಯ

Update: 2026-03-08 22:00 IST

Photo Credit : aljazeera.com

ರಿಯಾದ್: ಸೌದಿ ಅರೇಬಿಯಾದಲ್ಲಿ ವಸತಿ ಕಟ್ಟಡದ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ದೇಶದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ ಎಂದು Aljazeera ವರದಿ ಮಾಡಿದೆ.

ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್ ನಲ್ಲಿರುವ ವಸತಿ ಕಟ್ಟಡಕ್ಕೆ ದಾಳಿ ನಡೆದಿದೆ ಎಂದು ನಾಗರಿಕ ರಕ್ಷಣಾ ಏಜೆನ್ಸಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿದೆ. ‘ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ’ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಗಳು ಧಾವಿಸಿ ನೆರವು ಕಾರ್ಯಾಚರಣೆ ಕೈಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News