×
Ad

Saudi Arabia | ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರಲ್ಲಿ ಓರ್ವ ಭಾರತೀಯ

Update: 2026-03-08 22:39 IST

Photo Credit : aljazeera.com

ರಿಯಾದ್: ಸೌದಿ ಅರೇಬಿಯಾದ ಅಲ್-ಖರ್ಜ್ ನಲ್ಲಿ ವಸತಿ ಕಟ್ಟಡದ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರಲ್ಲಿ ಇಬ್ಬರಲ್ಲಿ ಓರ್ವರು ಭಾರತೀಯ, ಮತ್ತೋರ್ವರು ಬಾಂಗ್ಲಾದೇಶದ ಪ್ರಜೆ ಎಂದು ಸೌದಿ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ ಎಂದು Aljazeera ವರದಿ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಪೋಸ್ಟ್ನಲ್ಲಿ ನಾಗರಿಕ ರಕ್ಷಣಾ ಸಂಸ್ಥೆ, ಮೃತರು ಭಾರತೀಯ ಮತ್ತು ಬಾಂಗ್ಲಾದೇಶದ ಪ್ರಜೆಗಳು ಎಂದು ಸ್ಪಷ್ಟಪಡಿಸಿದೆ.

ಸೌದಿ ಅರೇಬಿಯಾದ ಅಲ್-ಖರ್ಜ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿನ ರಾಡಾರ್ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ನ ಕ್ರಾಂತಿಕಾರಿ ಗಾರ್ಡ್ ಈ ಹಿಂದೆ ಹೇಳಿಕೆ ನೀಡಿತ್ತು.

ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ–ಇಸ್ರೇಲ್ ದಾಳಿಗಳು ನಡೆಸಿದ ಬಳಿಕ, ಇರಾನಿನ ಸುಪ್ರೀಂ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆಯಾದ ಘಟನೆಯ ಬಳಿಕ ಗಲ್ಫ್ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿತು. ಈ ಬೆಳವಣಿಗೆಯ ನಂತರ ಇರಾನ್, ಇಸ್ರೇಲ್ ನಲ್ಲಿನ ನೆಲೆಗಳ ಜೊತೆಗೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲಗಳನ್ನು ಗುರಿಯಾಗಿಸಿಕೊಂಡು ದಾಳಿ ಆರಂಭಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News