×
Ad

ಸೌದಿ ಅರೇಬಿಯಾ | ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟವರು ಭಾರತೀಯರಲ್ಲ: ರಾಯಭಾರಿ ಕಚೇರಿ ಸ್ಪಷ್ಟನೆ

Update: 2026-03-09 22:18 IST

Photo Credit ; REUTERS

ರಿಯಾದ್, ಮಾ.9: ಸೌದಿ ಅರೆಬಿಯಾದ ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್‍ನಲ್ಲಿರುವ ವಸತಿ ಕಟ್ಟಡಕ್ಕೆ ರವಿವಾರ ನಡೆದ ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂದು ರಿಯಾದ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಹೇಳಿದೆ.

ರವಿವಾರ ಸಂಜೆ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಭಾರತೀಯ ಮೃತಪಟ್ಟಿರುವುದಾಗಿ ಈ ಹಿಂದೆ ವರದಿಯಾಗಿತ್ತು. ವರದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ರಾಯಭಾರಿ ಕಚೇರಿ ` ದಾಳಿಯಲ್ಲಿ ಮೃತಪಟ್ಟ ಇಬ್ಬರೂ ಬಾಂಗ್ಲಾದೇಶದ ಪ್ರಜೆಗಳು. ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂಬ ವರದಿಯಿಂದ ನಿರಾಳವಾಗಿದೆ. ಓರ್ವ ಭಾರತೀಯ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತೀಯ ರಾಯಭಾರಿ ಕಚೇರಿ ಸೌದಿ ಅರೆಬಿಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ. ಪಶ್ಚಿಮ ಏಶ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಲ್ಲಿರುವ ಭಾರತೀಯ ಪ್ರಜೆಗಳಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಲು ಸಲಹೆ ನೀಡಲಾಗಿದೆ' ಎಂದು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News