ರಿಯಾದ್: ಸೌದಿ ಅರೇಬಿಯದ ಪೂರ್ವ ಪ್ರಾಂತ್ಯದಲ್ಲಿರುವ ದಮ್ಮಾಮ್‌ ನ ಕಿಂಗ್ ಫಹದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿರುವುದನ್ನು ದೇಶದ ನಾಗರಿಕ ವಾಯುಯಾನ ಪ್ರಾಧಿಕಾರ ದೃಢಪಡಿಸಿದೆ ಎಂದು Aljazeera ವರದಿ ಮಾಡಿದೆ. 

ಸೌದಿ ಅರೇಬಿಯದ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ಹೌತಿ ಬಂಡುಕೋರರು ನಡೆಸಿದ ಇತ್ತೀಚಿನ ದಾಳಿಯಲ್ಲಿ ದಮ್ಮಾಮ್ ವಿಮಾನ ನಿಲ್ದಾಣವೂ ಗುರಿಯಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಕಿಂಗ್ ಫಹದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿರುವುದಾಗಿ ಹೌತಿ ಬಂಡಾಯಗಾರರು ಘೋಷಿಸಿದ ಕೆಲವೇ ಹೊತ್ತಿನಲ್ಲಿ ಪ್ರಾಧಿಕಾರ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದೆ.

ದಾಳಿಯಿಂದ ವಿಮಾನ ನಿಲ್ದಾಣಕ್ಕೆ ಉಂಟಾಗಿರುವ ಹಾನಿಯ ಪ್ರಮಾಣವನ್ನು ಅಂದಾಜಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ. ಆದರೆ, ಹಾನಿಯ ಪ್ರಮಾಣದ ಕುರಿತು ನಿಖರ ವಿವರಗಳನ್ನು ಬಹಿರಂಗಪಡಿಸಿಲ್ಲ.

ದಮ್ಮಾಮ್ ನಗರವು ಸೌದಿ ಅರೇಬಿಯದ ರಾಜಧಾನಿ ರಿಯಾದ್‌ ನಿಂದ ಈಶಾನ್ಯ ದಿಕ್ಕಿನಲ್ಲಿ ಸುಮಾರು 410 ಕಿ.ಮೀ (254 ಮೈಲು) ದೂರದಲ್ಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor