×
Ad

Saudi Arabia | ಅಬ್ಹಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೌದಿಗಳ ಕ್ಷಿಪಣಿ ದಾಳಿ

Update: 2026-07-14 21:13 IST

Photo Credit : AP 

ಸನಾ, ಜು.14: ಯೆಮನ್‌ ನ ಇರಾನ್ ಬೆಂಬಲಿತ ಹೌದಿ ಬಂಡುಕೋರರು ಸೋಮವಾರ ತಡರಾತ್ರಿ ಸೌದಿ ಅರೇಬಿಯಾದ ಅಬ್ಹಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್‌ ಗಳ ಮೂಲಕ ದಾಳಿ ನಡೆಸಿರುವುದಾಗಿ ತಿಳಿಸಿದ್ದು, ಸೌದಿ ವಾಯುಪ್ರದೇಶದ ಮೂಲಕ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ ಗಳನ್ನು ಬಳಸಿ ಅಬ್ಹಾ ವಿಮಾನ ನಿಲ್ದಾಣದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲಾಗಿದೆ. ಸನಾ ವಿಮಾನ ನಿಲ್ದಾಣದ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವವರೆಗೆ ಸೌದಿ ಅರೇಬಿಯಾದ ವಾಯುಪ್ರದೇಶದಲ್ಲಿ ಯಾವುದೇ ವಿಮಾನಯಾನ ಸಂಸ್ಥೆಗಳು ಹಾರಾಟ ನಡೆಸಬಾರದು ಎಂದು ಹೌದಿ ಮಿಲಿಟರಿ ವಕ್ತಾರ ಯಾಹ್ಯಾ ಸಾರೀ ಎಚ್ಚರಿಸಿದ್ದು, ಈ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಿಹೇಳಿದ್ದಾರೆ.

ಸನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ. ಆ ದಾಳಿಗೆ ಸೌದಿ ಅರೇಬಿಯಾವೇ ಕಾರಣ ಎಂದು ಹೌದಿಗಳು ಆರೋಪಿಸಿದ್ದಾರೆ. ಆದರೆ, ಸೌದಿ ಬೆಂಬಲಿತ ಯೆಮನ್ ಸರ್ಕಾರವು ಆ ದಾಳಿಗಳ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು, ಹೌದಿಗಳ ನಿಯಂತ್ರಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ಇರಾನ್‌ ನ ವಿಮಾನವೊಂದು ಇಳಿಯುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News