ರಿಯಾದ್, ಅ. 12: ಸೌದಿ ಅರೇಬಿಯಾದ ರಿಯಾದ್‌ ನಲ್ಲಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ರವಿವಾರ ನಡೆದ ದಾಳಿಯಲ್ಲಿ ಪಾಕಿಸ್ತಾನದ ಪ್ರಜೆಯೊಬ್ಬರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ ಎಂದು Aljazeera ವರದಿ ಮಾಡಿದೆ. 

ದಾಳಿಯಿಂದ ವಿಮಾನ ನಿಲ್ದಾಣದ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಹಾನಿಯ ಪ್ರಮಾಣವನ್ನು ಅಂದಾಜಿಸಲಾಗುತ್ತಿದೆ ಎಂದು ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನ ನಿಲ್ದಾಣದ ಎರಡು ಪ್ರಯಾಣಿಕ ಟರ್ಮಿನಲ್‌ ಗಳ ಮೇಲೆ ಕ್ಷಿಪಣಿ ಅಪ್ಪಳಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿತ್ತು ಎಂದು ಸೌದಿ ಅಧಿಕಾರಿಗಳು ಈ ಮೊದಲು ತಿಳಿಸಿದ್ದರು.

ಶನಿವಾರ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಎರಡೂ ದಾಳಿಗಳ ಹೊಣೆಗಾರಿಕೆಯನ್ನು ಯೆಮೆನ್‌ ನ ಹೌತಿ ಬಂಡುಕೋರರು ಹೊತ್ತುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor