ಸಾಂದರ್ಭಿಕ ಚಿತ್ರ (PTI)

ಲಂಡನ್ : ಸೌದಿ ಅರೇಬಿಯಾದ ಇಂಧನ ಮೂಲಸೌಕರ್ಯಗಳ ಮೇಲೆ ನಡೆದ ಹೊಸ ದಾಳಿಗಳು ಹಾಗೂ ಮಧ್ಯಪ್ರಾಚ್ಯದಲ್ಲಿ ಹಡಗುಗಳ ಮೇಲಿನ ದಾಳಿಗಳಿಂದ ಇಂಧನ ಪೂರೈಕೆ ಕುರಿತ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಸೋಮವಾರ ತೈಲ ಬೆಲೆ ಏರಿಕೆ ಮುಂದುವರಿದಿದೆ. ತೈಲ ಬೆಲೆ ಶೇ.3ಕ್ಕಿಂತಲೂ ಹೆಚ್ಚು ಏರಿಕೆಯಾಗಿದೆ ಎಂದು ವರದಿಯಾಗಿದೆ.

ಬ್ರೆಂಟ್ ಕಚ್ಚಾ ತೈಲದ ಬೆಲೆ 3.43 ಡಾಲರ್ (ಶೇ.3.3) ಏರಿಕೆಯಾಗಿ, ಪ್ರತಿ ಬ್ಯಾರೆಲ್‌ಗೆ 108.04 ಡಾಲರ್‌ಗೆ ತಲುಪಿದೆ. ಅದೇ ವೇಳೆ, WTI ಕಚ್ಚಾ ತೈಲದ ಬೆಲೆ 3.49 ಡಾಲರ್ (ಶೇ.3.5) ಏರಿಕೆಯಾಗಿ, ಪ್ರತಿ ಬ್ಯಾರೆಲ್‌ಗೆ 103.54 ಡಾಲರ್‌ಗೆ ತಲುಪಿದೆ.

ಮಧ್ಯಪ್ರಾಚ್ಯದಲ್ಲಿ ದಾಳಿಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಕಳೆದ ವಾರ ತೈಲ ಬೆಲೆಗಳು ಶೇ.9ರಷ್ಟು ಏರಿಕೆಯಾಗಿದ್ದವು. ಬ್ರೆಂಟ್ ಕಚ್ಚಾ ತೈಲದ ಬೆಲೆ ಜುಲೈ ಬಳಿಕ ಇದೇ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಹೆಚ್ಚಾಗಿತ್ತು.

ಈ ಏರಿಕೆಯ ಪರಿಣಾಮವಾಗಿ ಅಮೆರಿಕದಲ್ಲಿ ಡೀಸೆಲ್ ಬೆಲೆ ಪ್ರತಿ ಗ್ಯಾಲನ್‌ಗೆ 6 ಡಾಲರ್‌ಗಿಂತ ಹೆಚ್ಚಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕದಲ್ಲಿ ತೈಲ ಬೆಲೆ ಇಷ್ಟು ಅಧಿಕವಾಗಿದೆ. ಇದೇ ಕಾರಣಕ್ಕೆ ರಷ್ಯಾದ ಡೀಸೆಲ್ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸುವುದನ್ನು ನಿಲ್ಲಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಉಕ್ರೇನ್‌ಗೆ ಮನವಿ ಮಾಡುವಂತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor