ಸಾಂದರ್ಭಿಕ ಚಿತ್ರ (Photo: Al Jazeera) 

ರಿಯಾದ್: ಇರಾನ್ ಬೆಂಬಲಿತ ಹೂತಿ ಬಂಡುಕೋರರ ದಾಳಿ ಮತ್ತು ಅಮೆರಿಕದ ಸರಕಾರಿ ಅಧಿಕಾರಿಗಳನ್ನು ಗುರಿಯಾಗಿಸಲು ಇರಾನ್ ನಡೆಸುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ, ಸೌದಿ ಅರೇಬಿಯ ಸೇರಿದಂತೆ ಮಧ್ಯಪ್ರಾಚ್ಯದಾದ್ಯಂತ ಇರುವ ಅಮೆರಿಕದ ನಾಗರಿಕರಿಗೆ ಅಮೆರಿಕ ರಾಯಭಾರ ಕಚೇರಿ ಎಚ್ಚರಿಕೆ ನೀಡಿದೆ.

ರಿಯಾದ್‌ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯು, ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಭದ್ರತಾ ಸೂಚನೆ ಪ್ರಕಟಿಸಿದ್ದು, ಮಧ್ಯಪ್ರಾಚ್ಯದಲ್ಲಿರುವ ಅಮೆರಿಕನ್ನರು ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಿದೆ.

ಹೂತಿಗಳು ಸೌದಿ ಅರೇಬಿಯದ ಮೇಲೆ ಈ ಹಿಂದೆ ಹಲವು ದಾಳಿಗಳನ್ನು ನಡೆಸಿದ್ದಾರೆ. ನಾಗರಿಕ ವಿಮಾನ ನಿಲ್ದಾಣಗಳು ಮತ್ತು ಇತರ ಪ್ರಮುಖ ಮೂಲಸೌಕರ್ಯಗಳನ್ನೂ ಗುರಿಯಾಗಿಸಿಕೊಂಡಿದ್ದಾರೆ. ಈ ದಾಳಿಗಳಿಂದ ನಾಗರಿಕರು ಮೃತಪಟ್ಟಿದ್ದು, ಪ್ರಯಾಣ ವ್ಯವಸ್ಥೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ ಎಂದು ರಾಯಭಾರಿ ಕಚೇರಿ ತಿಳಿಸಿದೆ.

ಈ ಸಂಘರ್ಷಗಳು ತ್ವರಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಹೆಚ್ಚಿನ ಭದ್ರತಾ ಮಾಹಿತಿ ಮತ್ತು ಮುನ್ನೆಚ್ಚರಿಕೆಗಳಿಗಾಗಿ ಸೌದಿ ಅರೇಬಿಯಕ್ಕೆ ಸಂಬಂಧಿಸಿದ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಯಾಣ ಸಲಹೆಗಳನ್ನು ಪರಿಶೀಲಿಸುವಂತೆ ಅಮೆರಿಕ ನಾಗರಿಕರಿಗೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor