ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಹಿನ್ನಡೆ: ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ
Update: 2023-08-09 23:30 IST
ಇಸ್ಲಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಇಸ್ಲಮಾಬಾದ್ ನ ವಿಚಾರಣಾ ನ್ಯಾಯಾಲಯ ತನಗೆ ನೀಡಿರುವ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಬೇಕು ಎಂದು ಕೋರಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ಮನವಿಯನ್ನು ಇಸ್ಲಮಾಬಾದ್ ಹೈಕೋರ್ಟ್ ಬುಧವಾರ ತಳ್ಳಿಹಾಕಿದೆ.
ಆದರೆ, ಮುಂದಿನ ಐದು ದಿನದೊಳಗೆ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ತೋಷಖಾನ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ತನ್ನನ್ನು ದೋಷಿ ಎಂದು ಪರಿಗಣಿಸಿರುವುದು ಹಾಗೂ 3 ವರ್ಷದ ಜೈಲುಶಿಕ್ಷೆ ವಿಧಿಸಿರುವುದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ ಈ ತೀರ್ಪನ್ನು ಅಮಾನತುಗೊಳಿಸಬೇಕು ಎಂದು ಇಮ್ರಾನ್ ಮೇಲ್ಮನವಿ ಸಲ್ಲಿಸಿದ್ದರು.