ನೀರವ್ ಮೋದಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆ
ನೀರವ್ ಮೋದಿ | Photo Credit : PTI
ಲಂಡನ್, ಸೆ. 30: ಲಂಡನ್ ನ ಐಷಾರಾಮಿ ಅಪಾರ್ಟ್‌ಮೆಂಟ್ ಮಾರಾಟಕ್ಕೆ ಬ್ರಿಟನ್ ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ದೇಶಭ್ರಷ್ಟ ವಜ್ರದ ವ್ಯಾಪಾರಿ ನೀರವ್ ಮೋದಿ ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ನೀರವ್ ಮೋದಿಗೆ ಸಂಬಂಧಿಸಿದ ಐಷಾರಾಮಿ ಅಪಾರ್ಟ್‌ಮೆಂಟ್ ಮಾರಾಟಕ್ಕೆ ಬ್ರಿಟನ್ ನ್ಯಾಯಾಲಯ ಅನುಮೋದನೆ ನೀಡಿದೆ. ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಭಾರತಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುತ್ತಿರುವ 55 ವರ್ಷದ ಮೋದಿ, ಪ್ರಸ್ತುತ ಲಂಡನ್ ನಲ್ಲಿ ಜೈಲಿನಲ್ಲಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ವಂಚನೆಗೆ ಸಂಬಂಧಿಸಿದ ಆರೋಪಗಳ ಮೇಲೆ 2019ರಲ್ಲಿ ಬಂಧನಕ್ಕೊಳಗಾದ ಬಳಿಕ ಅವರು ಬ್ರಿಟನ್ ನಲ್ಲಿ ಬಂಧನದಲ್ಲಿದ್ದಾರೆ.