×
Ad

Switzerland| ಕ್ರಾನ್ಸ್–ಮೊಂಟಾನಾದ ಬಾರ್‌ನಲ್ಲಿ ಸ್ಫೋಟ; ಹಲವರು ಮೃತ್ಯು

Update: 2026-01-01 12:21 IST

Photo| NDTV

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್),ಜ.1:ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದಲ್ಲಿ ಬಾರ್‌ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಮೂಲ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ ನ ವಾಲಿಸ್ ಕ್ಯಾಂಟನ್‌ ನ ಪೊಲೀಸ್ ವಕ್ತಾರ ಗೇಟನ್ ಲಾಥಿಯನ್ ಈ ಕುರಿತು ಪ್ರತಿಕ್ರಿಯಿಸಿ,  "ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹಲವರು ಮೃತಪಟ್ಟಿದ್ದಾರೆ,” ಎಂದು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಹಾಗೂ ಇತರೆ ತುರ್ತು ಸೇವೆಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಸ್ಥಳೀಯ ಮಾಧ್ಯಮಗಳು ಪ್ರಕಟಿಸಿದ ಚಿತ್ರಗಳಲ್ಲಿ ಸ್ಫೋಟ ಸಂಭವಿಸಿದ ಕಟ್ಟಡ ಬೆಂಕಿಗಾಹುತಿಯಾಗಿರುವುದು ಕಂಡುಬಂದಿದೆ. ಸ್ಫೋಟದ ಕಾರಣ ಮತ್ತು ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News