×
Ad

ಅಮೆರಿಕದಲ್ಲಿ ಮತ್ತೆ ಶೂಟೌಟ್ | ಇಬ್ಬರು ಮೃತ್ಯು, 19 ಮಂದಿಗೆ ಗಾಯ

Update: 2024-07-08 21:10 IST

ಸಾಂದರ್ಭಿಕ ಚಿತ್ರ

ನ್ಯೂಯಾರ್ಕ್: ಮಿಚಿಗನ್ ರಾಜ್ಯದ ಡೆಟ್ರಾಯಿಟ್ ನಗರದಲ್ಲಿ ನಡೆಯುತ್ತಿದ್ದ ಸಮುದಾಯ ಔತಣಕೂಟದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದು ಇತರ 19 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಗುಂಡಿನ ದಾಳಿಯಲ್ಲಿ 20 ವರ್ಷದ ಶಂಕಿತ ಆರೋಪಿಯೂ ಗಾಯಗೊಂಡಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆನೊ ರಸ್ತೆಯಲ್ಲಿ ಔತಣಕೂಟ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಆರೋಪಿ ಮನಬಂದಂತೆ ಗುಂಡು ಹಾರಿಸಿದ್ದಾನೆ. 20 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ ತೀವ್ರ ಗಾಯಗೊಂಡಿದ್ದ ಮತ್ತೊಬ್ಬ ಮಹಿಳೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾಳೆ. ಗಾಯಗೊಂಡವರಲ್ಲಿ 14 ಮಂದಿಯ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರು ಮತ್ತು ಗಾಯಗೊಂಡವರೆಲ್ಲಾ 17ರಿಂದ 28 ವರ್ಷದೊಳಗಿನವರು ಎಂದು ಡೆಟ್ರಾಯಿಟ್ ಪೊಲೀಸ್ ಆಯುಕ್ತ ರಿಕಾರ್ಡೊ ಮೂರ್ ಹೇಳಿರುವುದಾಗಿ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News