×
Ad

ಅಮೆರಿಕದಲ್ಲಿ ಶೂಟೌಟ್: ಪೊಲೀಸ್ ಸಹಿತ ಇಬ್ಬರ ಸಾವು

Update: 2024-04-15 22:15 IST

ನ್ಯೂಯಾರ್ಕ್: ನ್ಯೂಯಾರ್ಕ್ನ ಸಿರಾಕ್ಯುಸ್ ನಗರದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸ್ ಸಿಬಂದಿ ಹಾಗೂ ಕಾನೂನು ಜಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಆರೋಪಿಯನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರವಿವಾರ ರಾತ್ರಿ 9 ಗಂಟೆಗೆ ಲಿವರ್ಪೂಲ್ ಪ್ರದೇಶದಲ್ಲಿ ಮನೆಯೊಂದರ ಎದುರು ಅನುಮಾನಾಸ್ಪದ ಕಾರನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಬಗ್ಗೆ ಅನುಮಾನಗೊಂಡ ಪೊಲೀಸರು ಕಾರನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ಕಾರಿನೊಡನೆ ಪರಾರಿಯಾಗಿದ್ದಾನೆ. ಕಾರನ್ನು ಬೆನ್ನಟ್ಟಿದ ಪೊಲೀಸರ ತಂಡ ಸಿರಾಕ್ಯುಸ್ ನಗರದ ಬಳಿ ಕಾರನ್ನು ಅಡ್ಡಗಟ್ಟಿ ತಪಾಸಣೆಗೆ ಮುಂದಾಗಿದ್ದಾರೆ. ಕಾರಿನಲ್ಲಿ ಗನ್ ಇರುವ ಬಗ್ಗೆ ಚಾಲಕನಲ್ಲಿ ಪ್ರಶ್ನಿಸಿದಾಗ ಆತ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ಪೊಲೀಸ್ ಹಾಗೂ ಕಾನೂನು ಜಾರಿ ಅಧಿಕಾರಿ ಮೃತಪಟ್ಟಿದ್ದಾರೆ. ಪೊಲೀಸರ ಪ್ರತಿದಾಳಿಯಲ್ಲಿ ಶಂಕಿತ ಆರೋಪಿಯನ್ನೂ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಜೋಸೆಫ್ ಸಿಸಿಲಿ ಸುದ್ಧಿಗೋಷ್ಠಿಯಲ್ಲಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News