×
Ad

ವಾಷಿಂಗ್ಟನ್‍ನಲ್ಲಿ ಶೂಟೌಟ್: ಕನಿಷ್ಠ 5 ಮಂದಿಗೆ ಗಾಯ

Update: 2025-01-04 22:40 IST

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ಡಿ.ಸಿಯಲ್ಲಿ ಶುಕ್ರವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 5 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈಶಾನ್ಯ ವಾಷಿಂಗ್ಟನ್‍ನ ಹ್ಯಾರಿ ಥಾಮಸ್‍ವೇ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 8:20ಕ್ಕೆ ಎರಡು ಗುಂಪಿನ ನಡುವೆ ಆರಂಭಗೊಂಡ ಮಾತಿನ ಚಕಮಕಿ ತಾರಕಕ್ಕೇರಿ ಓರ್ವ ವ್ಯಕ್ತಿ ಗುಂಡು ಹಾರಿಸಿರುವುದಾಗಿ ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಓರ್ವ ಮಹಿಳೆ ಸೇರಿದಂತೆ ಐದು ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News