×
Ad

ಇಂದು ಭೂಮಿಗೆ ಬಂದಿಳಿಯಲಿರುವ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು

Update: 2025-07-15 13:27 IST

ಹೊಸದಿಲ್ಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಇಂದು ಭೂಮಿಗೆ ಬಂದಿಳಿಯಲಿದ್ದಾರೆ.

ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸೋಮವಾರ ಸಂಜೆ ಭೂಮಿಗೆ ಮರು ಪ್ರಯಾಣ ಆರಂಭಿಸಿದ್ದರು. ಒಟ್ಟು 22.5 ಗಂಟೆಗಳ ಕಾಲ ಪ್ರಯಾಣ ಬೆಳೆಸಿ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಗೆ ಗಗನ ಯಾತ್ರಿಗಳು ಬಂದಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ ಅಂತರಿಕ್ಷ ಯಾನಕ್ಕೆ ತೆರಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News