ಸಿಧು ಮೂಸೇವಾಲಾ ಹತ್ಯೆಯ ರೂವಾರಿ ಗೋಲ್ಡಿ ಬ್ರಾರ್ ಅಮೆರಿಕದಲ್ಲಿ ಗುಂಡೇಟಿಗೆ ಬಲಿ?
Update: 2024-05-01 18:42 IST
PC : Sidhu Moosewala / instagram
ಹೊಸದಿಲ್ಲಿ : ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರ ಹತ್ಯೆ ಪ್ರಕರಣದ ರೂವಾರಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ದಲ್ಲಾ ಲಖ್ಬೀರ್ ಗ್ಯಾಂಗ್‌ನ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.
ಕ್ಯಾಲಿಫೋರ್ನಿಯಾದ ಹೋಟೆಲ್ ಫೇರ್‌ಮೌಂಟ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಕೆನಡಾದಲ್ಲಿನ 25 ಮೋಸ್ಟ್ ವಾಂಟೆಡ್ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದ. 2022ರ ಮೇ 29 ರಂದು ಗೋಲ್ಡಿ ಬ್ರಾರ್‌ನ ಸೂಚನೆಯ ಮೇರೆಗೆ ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು ಎನ್ನಲಾಗಿದೆ.