ಡೊನಾಲ್ಡ್ ಟ್ರಂಪ್ | Photo Credit : AP 

ವಾಶಿಂಗ್ಟನ್, ಅ. 22: ಸಂಘರ್ಷವನ್ನು ಅಂತ್ಯಗೊಳಿಸಲು ಅಮೆರಿಕ ಪ್ರಸ್ತುತ ಇರಾನ್ ಜೊತೆ ಯಾವುದೇ ಮಾತುಕತೆ ನಡೆಸುತ್ತಿಲ್ಲ. ಶೀಘ್ರದಲ್ಲೇ ಏನಾದರೂ ನಡೆಯಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

‘ಹೆಚ್ಚಿನ ಜನರು ಇದು ಚುನಾವಣೆಯ ನಂತರ ನಡೆಯಲಿದೆ ಎಂದು ಭಾವಿಸಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡೋಣ. ಅಮೆರಿಕ ಇರಾನ್ ಜೊತೆ ಮಾತುಕತೆ ನಡೆಸುತ್ತಿಲ್ಲ. ಶೀಘ್ರದಲ್ಲೇ ಏನಾದರೂ ನಡೆಯಲಿದೆ’ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟ್ರಂಪ್ ಹೇಳಿದರು.

ಈ ಮಧ್ಯೆ, ಯಮನ್‌ ನ ಇರಾನ್ ಬೆಂಬಲಿತ ಹೂತಿ ಬಂಡುಕೋರರು ನಡೆಸುತ್ತಿರುವ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದಲ್ಲಿರುವ ತನ್ನ ಅನಗತ್ಯ ರಾಯಭಾರ ಕಚೇರಿ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ದೇಶ ತೊರೆಯುವಂತೆ ಆದೇಶಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಬುಧವಾರ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor