Photo Credit : X 

ಜೋಹಾನ್ಸ್‍ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿಗಳಲ್ಲಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದ ರಾಜಧಾನಿ ಪ್ರಿಟೋರಿಯಾ ಬಳಿಯ ಜೆಫ್ಸ್‍ವಿಲ್ಲೆ ಅನಧಿಕೃತ ವಸಾಹತು ಪ್ರದೇಶದ ಗುಡಿಸಲೊಂದರಲ್ಲಿ 9 ಜನರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಸ್ವೀಟ್‍ವಾಟರ್ಸ್‍ನಲ್ಲಿ ಗುಂಡಿನ ದಾಳಿಗೆ ತುತ್ತಾದ ವಾಹನವೊಂದರ ಒಳಗೆ ಇತರ ಎಂಟು ಜನರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಎರಡು ಗುಂಡಿನ ದಾಳಿಗಳ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಕೃಷ್ಣ ಮೂರ್ತಿ , ವಾರ್ತಾಭಾರತಿ

contributor