×
Ad

ದಕ್ಷಿಣ ಕೊರಿಯಾ | ಬೆಂಕಿ ದುರಂತ ; 12 ಮಂದಿ ಆಸ್ಪತ್ರೆಗೆ ದಾಖಲು

Update: 2025-01-04 22:39 IST

ಸಾಂದರ್ಭಿಕ ಚಿತ್ರ

ಸಿಯೋಲ್: ದಕ್ಷಿಣ ಕೊರಿಯಾದ ಸಿಯೊಂಗ್ನಮ್ ನಗರದಲ್ಲಿ 8 ಅಂತಸ್ತಿನ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ತೀವ್ರ ಅಸ್ವಸ್ಥಗೊಂಡ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಕಟ್ಟಡದಲ್ಲಿದ್ದ 30 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದಾ ಜನರಿಂದ ತುಂಬಿರುವ ವಾಣಿಜ್ಯ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಹೋಟೆಲ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣ ಮಾತ್ರದಲ್ಲಿ ಇತರ ಅಂಗಡಿಗಳಿಗೂ ಹಬ್ಬಿದ್ದು ಹೊಗೆಯ ಕಾರ್ಮೋಡ ಆವರಿಸಿದೆ. ಕಟ್ಟಡದ ಆವರಣದಲ್ಲಿರುವ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿದ್ದ ಮಕ್ಕಳೂ ಸೇರಿದಂತೆ ಉಸಿರಾಟದ ಸಮಸ್ಯೆಗೆ ಸಿಲುಕಿದ 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ 82 ವಾಹನಗಳ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News