×
Ad

ಆಸ್ಟ್ರೇಲಿಯಾ: ಭಾರತೀಯ ವಿದ್ಯಾರ್ಥಿಯ ಇರಿದು ಹತ್ಯೆ

Update: 2024-05-06 23:36 IST

ಸಾಂದರ್ಭಿಕ ಚಿತ್ರ 

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ನಡೆದ ಜಗಳ ತಾರಕಕ್ಕೇರಿ ಒಬ್ಬ ವಿದ್ಯಾರ್ಥಿಯನ್ನು ಇರಿದು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಮೆಲ್ಬೋರ್ನ್‍ನ ಆಗ್ನೇಯದಲ್ಲಿರುವ ಆರ್ಮಂಡ್ ನಗರದಲ್ಲಿ ನಡೆದ ದುರಂತದಲ್ಲಿ ಹರ್ಯಾಣದ ಕರ್ನಾಲ್ ಜಿಲ್ಲೆಯ 22 ವರ್ಷದ ಎಂಟೆಕ್ ವಿದ್ಯಾರ್ಥಿ ನವಜೀತ್ ಸಂಧು ಚೂರಿ ಇರಿತದಿಂದ ಸಾವನ್ನಪ್ಪಿದ್ದಾನೆ. ಆರೋಪಿಗಳಾದ ಭಾರತೀಯ ಮೂಲದ ವಿದ್ಯಾರ್ಥಿಗಳಾದ ಅಭಿಜೀತ್ ಮತ್ತು ರಾಬಿನ್ ಗಾರ್ಟನ್ ಪರಾರಿಯಾಗಿದ್ದು ಅವರ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಕ್ಟೋರಿಯಾ ಪೊಲೀಸರು ಹೇಳಿದ್ದಾರೆ.

ಮನೆ ಬಾಡಿಗೆ ಪಾವತಿಸುವ ವಿಷಯದಲ್ಲಿ ಭಾರತೀಯ ವಿದ್ಯಾರ್ಥಿಗಳು ಜಗಳವಾಡುತ್ತಿದ್ದಾಗ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ ಸಂಧುವಿನ ಎದೆಗೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಬಳಿಕ ಆರೋಪಿಗಳು ರಸ್ತೆ ಬದಿ ನಿಂತಿದ್ದ ಕಾರನ್ನು ಕದ್ದು ಅದರಲ್ಲಿ ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಗಳಿಂದ ದೃಢಪಟ್ಟಿದೆ. ಮೃತದೇಹವನ್ನು ಭಾರತಕ್ಕೆ ಮರಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News