×
Ad

ಟ್ರಂಪ್ ಬಗ್ಗೆ ಮೋದಿಗೇಕೆ ಇಷ್ಟೊಂದು ಭಯ ಎಂದು ಕೇಳಿದ ಸುಬ್ರಹ್ಮಣ್ಯನ್ ಸ್ವಾಮಿ

ಟ್ರಂಪ್ ಜೊತೆ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ನಾಯಕ

Update: 2026-03-11 01:09 IST

ಸುಬ್ರಹ್ಮಣ್ಯನ್ ಸ್ವಾಮಿ

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಇಷ್ಟೊಂದು ಭಯಪಡುತ್ತಾರೆ ಎಂದು BJPಯ ಹಿರಿಯ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

‘ಭಾರತದ ಮೂರನೇ ಅವಧಿಗೆ ಪ್ರಧಾನಿಯಾದ ಮೋದಿ ಟ್ರಂಪ್ ಬಗ್ಗೆ ಏಕೆ ಇಷ್ಟೊಂದು ಭಯಪಡುತ್ತಾರೆ?’ ಎಂದು ಸ್ವಾಮಿ ಅವರು ಟ್ವೀಟ್‌ ನಲ್ಲಿ ಪ್ರಶ್ನಿಸಿದ್ದಾರೆ.

ತಮಗೆ ಪರಿಚಯವಿರುವ ಕೆಲವು ಅಮೆರಿಕನ್ನರು, ಮೋದಿ ಟ್ರಂಪ್ ಜೊತೆ ಯಾವುದೋ ರೀತಿಯ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಆದರೆ ಆ ವಿಷಯವನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ. ‘ನಾನು ಇನ್ನೂ ಯಾವುದರಿಂದ ಮತ್ತು ಯಾರಿಂದ ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಅದು ಹೊರಬಂದರೆ ಮೋದಿಯವರು ಪ್ರಧಾನಿಯ ಹುದ್ದೆಗೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಉಂಟಾಗಬಹುದು’ ಎಂದು ಅವರು ಟ್ವೀಟ್‌ ನಲ್ಲಿ ಹೇಳಿದ್ದಾರೆ.

ಸುಬ್ರಹ್ಮಣ್ಯನ್ ಸ್ವಾಮಿ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲಿಯೂ ಗಮನ ಸೆಳೆದಿದೆ. ಆದರೆ ಈ ಆರೋಪಕ್ಕೆ ಸಂಬಂಧಿಸಿದಂತೆ ಅವರು ಯಾವುದೇ ವಿವರ ಅಥವಾ ಸಾಕ್ಷ್ಯವನ್ನು ಅವರು ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News