×
Ad

ತೈವಾನ್: ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; 6 ಮಂದಿ ಮೃತ್ಯು

Update: 2023-09-23 22:56 IST

screenscrab from X/GlobalObserverX

ತೈಪೆ : ತೈವಾನ್‍ನ ಗಾಲ್ಫ್ ಚೆಂಡು ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಟ 6 ಮಂದಿ ಮೃತಪಟ್ಟಿದ್ದು 100ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.

ಪಿಂಗ್‍ಟಂಗ್ ನಗರದ ಫ್ಯಾಕ್ಟರಿಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು ರಾತ್ರಿಯಿಡೀ ಹೊತ್ತಿಕೊಂಡು ಉರಿದಿದೆ. ಫ್ಯಾಕ್ಟರಿಯಲ್ಲಿ ಸಂಗ್ರಹಿಸಿಟ್ಟಿದ್ದ ರಾಸಾಯನಿಕದಿಂದ ಬೆಂಕಿ ಹರಡಿದೆ. ಮೃತರು ಹಾಗೂ ಗಾಯಾಳುಗಳಲ್ಲಿ ಹೆಚ್ಚಿನವರು ಫ್ಯಾಕ್ಟರಿಯ ಕಾರ್ಮಿಕರಾಗಿದ್ದಾರೆ. ಅಗ್ನಿಶಾಮಕ ದಳದ ಓರ್ವ ಸಿಬಂದಿ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ತೈವಾನ್ ಅಧ್ಯಕ್ಷೆ ತ್ಸಾಯ್ ಇಂಗ್-ವೆನ್ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದರು ಹಾಗೂ ತನಿಖೆಗೆ ಆದೇಶಿಸಿದರು ಎಂದು ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News