Photo Credit: indianexpress

ನ್ಯೂಯಾರ್ಕ್, ಆ. 26: ಫ್ಲೋರಿಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣ ಮೂಲದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೂವರೂ ತಮ್ಮ ‘ಪಾರ್ಟ್-ಟೈಮ್’ ಕೆಲಸದ ಸ್ಥಳಕ್ಕೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಮೂವರೂ ಉನ್ನತ ಶಿಕ್ಷಣಕ್ಕಾಗಿ ಸುಮಾರು ಮೂರು ತಿಂಗಳ ಹಿಂದಷ್ಟೇ ಅಮೆರಿಕಾಗೆ ತೆರಳಿದ್ದರು. ಮೃತರಲ್ಲಿ ಒಬ್ಬರನ್ನು ನಿಜಾಮಾಬಾದ್ ಜಿಲ್ಲೆಯ ನವಿಪೇಟ್ ಪ್ರದೇಶದ ರಾಹುಲ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ವಿದ್ಯಾರ್ಥಿಗಳ ವಿವರಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor