Thailand | ಶಾಲೆಯಲ್ಲಿ ಗುಂಡು ಹಾರಿಸಿದ ವಿದ್ಯಾರ್ಥಿ: ಶಿಕ್ಷಕ ಸೇರಿ ಇಬ್ಬರು ಮೃತ್ಯು, 15 ಮಂದಿಗೆ ಗಾಯ

Update: 2026-08-07 11:59 IST

Photo credit: PTI

ಬ್ಯಾಂಕಾಕ್ : ಥೈಲ್ಯಾಂಡ್ ನ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದರಿಂದ ಶಿಕ್ಷಕ ಸೇರಿದಂತೆ ಕನಿಷ್ಠ ಇಬ್ಬರು ಮೃತಪಟ್ಟಿದ್ದು, 15 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಬ್ಯಾಂಕಾಕ್ ನ ಉತ್ತರ ಭಾಗದ ಶಾಲೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಶಂಕಿತ ಬಂದೂಕುಧಾರಿ ಕೂಡ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತ ಆರೋಪಿ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.

ಪ್ಲೈ ಬಾಂಗ್ ಉಪಜಿಲ್ಲಾ ಪೊಲೀಸ್ ಇಲಾಖೆಯ ಮುಖ್ಯಸ್ಥ ಲೆಫ್ಟಿನೆಂಟ್ ಕರ್ನಲ್ ಪಸಾಕೋರ್ನ್ ಚೈತವಿವೊಂಗ್ ಪ್ರತಿಕ್ರಿಯಿಸಿ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ಖಚಿತವಾಗಿಲ್ಲ. ಅಧಿಕಾರಿಗಳು ಇನ್ನೂ ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ʼರಾಯಿಟರ್ಸ್ʼ ಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News