×
Ad

ಟ್ರಂಪ್ ಮೇಲಿನ ಗುಂಡಿನ ದಾಳಿಯ ಬಗ್ಗೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-07-14 08:44 IST

Photo: fb/donaldtrump/kamalaharris

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯ ಬಗ್ಗೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಕಮಲಾ ಹ್ಯಾರಿಸ್, 'ಪೆನ್ಸಿಲ್ವೇನಿಯಾದಲ್ಲಿ ಮಾಜಿ ಅಧ್ಯಕ್ಷ ಟ್ರಂಪ್ ಅವರ ಮೇಲಿನ ದಾಳಿಯ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಅವರಿಗೆ ಗಂಭೀರ ಗಾಯವಾಗಿಲ್ಲ. ಟ್ರಂಪ್ ಹಾಗೂ ಘಟನೆಯಲ್ಲಿ ಗಾಯಗೊಂಡವರಿಗಾಗಿ ಪ್ರಾರ್ಥಿಸುತ್ತೇನೆ. ತಕ್ಷಣ ಕ್ರಮ ಕೈಗೊಂಡಿರುವ ಅಮೆರಿಕದ ಸೀಕ್ರೆಟ್ ಸರ್ವಿಸ್, ಸ್ಥಳೀಯ ಅಧಿಕಾರಿಗಳಿಗೆ ಕೃತಜ್ಞರಾಗಿದ್ದೇವೆ' ಎಂದು ಹೇಳಿದ್ದಾರೆ.

'ಇಂತಹ ಹಿಂಸಾಚಾರಕ್ಕೆ ನಮ್ಮ ದೇಶದಲ್ಲಿ ಯಾವುದೇ ಅವಕಾಶವಿಲ್ಲ. ನಾವೆಲ್ಲರೂ ಈ ಹೇಯ ಕೃತ್ಯವನ್ನು ಖಂಡಿಸುತ್ತೇವೆ. ಅಲ್ಲದೆ ಈ ಘಟನೆ ಮತ್ತಷ್ಟು ಹಿಂಸಾಚಾರಕ್ಕೆ ಕಾರಣವಾಗದಂತೆ ಎಚ್ಚರ ವಹಿಸಬೇಕು' ಎಂದು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News