Photo Credit : aljazeera.com

ಗಾಝಾ ನಗರ, ಅ. 26: ದಕ್ಷಿಣ ಗಾಝಾ ಪಟ್ಟಿಯ ನಿರಾಶ್ರಿತರ ಶಿಬಿರದ ಮೇಲೆ ಸೋಮವಾರ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಸಣ್ಣ ಮಗು ಸೇರಿದಂತೆ ಮೂವರು ಪೆಲಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಖಾನ್ ಯೂನಿಸ್ ನಗರದ ಪಶ್ಚಿಮ ಭಾಗದ ಅಲ್-ಮವಾಸಿಯಲ್ಲಿರುವ ನಿರಾಶ್ರಿತರ ಶಿಬಿರವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ವಾಯುದಾಳಿ ನಡೆಸಿದೆ. ಕಳೆದ 24 ಗಂಟೆಗಳಲ್ಲಿ ಗಾಝಾದಲ್ಲಿ ಇಸ್ರೇಲ್ ಪಡೆಗಳ ಗುಂಡಿನ ದಾಳಿ ಮತ್ತು ವಾಯುದಾಳಿಗಳಿಂದ ಒಟ್ಟು 11 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ನಾಗರಿಕ ರಕ್ಷಣಾ ಪಡೆ ವಕ್ತಾರರು ಸೋಮವಾರ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor