ಅಮೆರಿಕ ದಾಳಿ: ಟೆಹ್ರಾನ್–ಮಶ್ಹಾದ್ ರೈಲು ಸಂಚಾರ ಸ್ಥಗಿತ
ಸಾಂದರ್ಭಿಕ ಚಿತ್ರ (PTI)
ಟೆಹ್ರಾನ್: ಅಮೆರಿಕ ನಡೆಸಿದ ದಾಳಿಯಿಂದ ಟೆಹ್ರಾನ್–ಮಶ್ಹಾದ್ ರೈಲು ಮಾರ್ಗದ ಒಂದು ಭಾಗಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ, ಆ ಮಾರ್ಗದಲ್ಲಿ ಪ್ರಯಾಣಿಕರ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.
ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ರೈಲ್ವೆ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಹಾನಿಗೊಳಗಾದ ಮಾರ್ಗದ ದುರಸ್ತಿಗಾಗಿ ತಾಂತ್ರಿಕ ಹಾಗೂ ಕಾರ್ಯಾಚರಣೆ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಸಾಧ್ಯವಾದಷ್ಟು ಕಡಿಮೆ ಅವಧಿಯಲ್ಲಿ ರೈಲು ಮಾರ್ಗವನ್ನು ಪುನಃ ಕಾರ್ಯಾಚರಣೆಗೆ ತರಲು ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ರೈಲು ಸಂಚಾರ ಸ್ಥಗಿತಗೊಂಡಿರುವ ಕಾರಣ ಮಾರ್ಗ ಮಧ್ಯೆ ಸಿಲುಕಿರುವ ಪ್ರಯಾಣಿಕರನ್ನು ರಸ್ತೆ ಮಾರ್ಗದ ಮೂಲಕ ಮಶ್ಹಾದ್‌ಗೆ ಕರೆದೊಯ್ಯಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ ಎಂದು Aljazeera ವರದಿ ಮಾಡಿದೆ.