×
Ad

ವಲಸೆ ಪ್ರತಿಭಟನೆ ನಿಯಂತ್ರಿಸಲು ರಾಷ್ಟ್ರೀಯ ಸೇನಾದಳ ನಿಯೋಜಿಸಿದ ಟ್ರಂಪ್

Update: 2025-06-08 23:10 IST

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Photo: PTI)

ನ್ಯೂಯಾರ್ಕ್: ವಲಸೆ ಪ್ರಕ್ರಿಯೆಗೆ ಸಂಬಂಧಿಸಿದ ದಾಳಿಗಳನ್ನು ವಿರೋಧಿಸಿ ಲಾಸ್ ಏಂಜಲೀಸ್‍ನಲ್ಲಿ ಶನಿವಾರ ನಡೆದ ಹಿಂಸಾತ್ಮಕ ಪ್ರತಿಭಟನೆಯನ್ನು ನಿಯಂತ್ರಿಸಲು ರಾಷ್ಟ್ರೀಯ ಸೇನಾದಳದ 2000 ಸಿಬ್ಬಂದಿಗಳನ್ನು ನಿಯೋಜಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿರುವುದಾಗಿ ಶ್ವೇತಭವನದ ಮೂಲಗಳು ಹೇಳಿವೆ.

ಲಾಸ್ ಏಂಜಲೀಸ್‍ನಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಫೆಡರಲ್ ಸಿಬ್ಬಂದಿಗಳನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಫೆಡರಲ್ ಏಜೆಂಟರ ಕಾರಿಗೆ ಬೆಂಕಿ ಹಚ್ಚಲಾಗಿದ್ದು ಬೈಕ್‍ನಲ್ಲಿ ಆಗಮಿಸಿದ್ದ ಓರ್ವ ವ್ಯಕ್ತಿ ಫೆಡರಲ್ ಸಿಬ್ಬಂದಿಗಳತ್ತ ಕಲ್ಲುಗಳನ್ನು ಎಸೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹಿಂಸಾಚಾರವನ್ನು ನಿಯಂತ್ರಿಸಲು ಹೊಗೆ ಬಾಂಬ್ ಹಾಗೂ ಅಶ್ರುವಾಯು ಪ್ರಯೋಗಿಸಲಾಗಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News