×
Ad

ಪ್ರತಿಭಟನಾಕಾರರಿಗೆ ಮರಣದಂಡನೆ| ಟ್ರಂಪ್ ಹೇಳಿಕೆ ನಿರಾಕರಿಸಿದ ಇರಾನ್

Update: 2026-01-23 22:01 IST

ಡೊನಾಲ್ಡ್ ಟ್ರಂಪ್ | Photo Credit : AP \ PTI 

ಟೆಹ್ರಾನ್, ಜ.23: ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಸಂದರ್ಭ ಬಂಧಿಸಲಾಗಿದ್ದ 800ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಮರಣದಂಡನೆ ವಿಧಿಸುವುದನ್ನು ತನ್ನ ಮಧ್ಯಪ್ರವೇಶ ತಪ್ಪಿಸಿದೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ಇರಾನ್ ಶುಕ್ರವಾರ ನಿರಾಕರಿಸಿದೆ.

ಈ ಪ್ರತಿಪಾದನೆ ಸಂಪೂರ್ಣ ಸುಳ್ಳು. ನ್ಯಾಯಾಂಗವು ಇಂತಹ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಇರಾನ್‍ನ ಉನ್ನತ ಪ್ರಾಸಿಕ್ಯೂಟರ್ ಮುಹಮ್ಮದ್ ಮೊವಾಹೆದಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸಾಮೂಹಿಕ ಮರಣದಂಡನೆ ಮತ್ತು ಶಾಂತಿಯುತ ಪ್ರತಿಭಟನಾಕಾರರನ್ನು ಹತ್ಯೆ ಮಾಡುವುದು ಇರಾನ್ ಮೇಲೆ ಅಮೆರಿಕದ ಮಿಲಿಟರಿ ದಾಳಿಗೆ ಕೆಂಪು ಗೆರೆಯಾಗಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ, ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಹಿಂಸಾತ್ಮಕ ರೀತಿಯಲ್ಲಿ ದಮನಿಸುವ ಸಂದರ್ಭ ಕನಿಷ್ಠ 5,002 ಮಂದಿ ಮೃತಪಟ್ಟಿದ್ದು ಇದರಲ್ಲಿ 4,716 ಪ್ರತಿಭಟನಾಕಾರರು, 203 ಮಂದಿ ಸರಕಾರಕ್ಕೆ ಸಂಬಂಧಿಸಿದವರು, 43 ಮಕ್ಕಳು, 40 ಮಂದಿ ನಾಗರಿಕರು ಸೇರಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿ 26,800 ಮಂದಿಯನ್ನು ಬಂಧಿಸಲಾಗಿದೆ ಎಂದು ಅಮೆರಿಕಾ ಮೂಲದ `ಹ್ಯೂಮನ್ ರೈಟ್ಸ್ ಆಕ್ಟಿವಿಸ್ಟ್ಸ್ ನ್ಯೂಸ್ ಏಜೆನ್ಸಿ' ಶುಕ್ರವಾರ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News