×
Ad

ನೊಬೆಲ್ ಶಾಂತಿ ಪ್ರಶಸ್ತಿಗೆ ನನ್ನಷ್ಟು ಆರ್ಹ ಬೇರೆ ಯಾರೂ ಇಲ್ಲ: ಡೊನಾಲ್ಡ್ ಟ್ರಂಪ್

ಭಾರತ, ಪಾಕ್ ನಡುವಿನ ಸಂಘರ್ಷ ನಿಲ್ಲಿಸಿದ್ದೇನೆ ಎಂದು ಪುನರುಚ್ಛರಿಸಿದ ಅಮೆರಿಕ ಅಧ್ಯಕ್ಷ

Update: 2026-01-10 12:48 IST

ಡೊನಾಲ್ಡ್ ಟ್ರಂಪ್ (Photo: PTI)

ವಾಷಿಂಗ್ಟನ್: “ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದೇನೆ. ನೊಬೆಲ್ ಶಾಂತಿ ಪ್ರಶಸ್ತಿಗೆ ನನ್ನಷ್ಟು ಆರ್ಹನಾದ ವ್ಯಕ್ತಿ ಇತಿಹಾಸದಲ್ಲಿ ಬೇರೆ ಯಾರೂ ಇಲ್ಲ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಏನೂ ಮಾಡದೆ ಬರಾಕ್ ಒಬಾಮಾ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಟೀಕಿಸಿದ್ದಾರೆ.

ವೆನೆಜುವೆಲಾದ ತೈಲ ನಿಕ್ಷೇಪಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಶ್ವೇತಭವನದಲ್ಲಿ ತೈಲ ಹಾಗೂ ಅನಿಲ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಕಳೆದ ಮೇ ತಿಂಗಳಿನಲ್ಲಿ ನಡೆದ ಸಂಘರ್ಷದಲ್ಲಿ 8 ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ವಿಮಾನ ಯಾವ ದೇಶಕ್ಕೆ ಸೇರಿದೆ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ.

"ನೋಡಿ, ಜನರು ಟ್ರಂಪ್‌ ಅನ್ನು ಇಷ್ಟಪಡುತ್ತಾರೋ ಅಥವಾ ಇಷ್ಟಪಡುವುದಿಲ್ಲವೋ ಗೊತ್ತಿಲ್ಲ, ಆದರೆ ನಾನು ಎಂಟು ದೊಡ್ಡ ಯುದ್ಧಗಳನ್ನು ಇತ್ಯರ್ಥಪಡಿಸಿದ್ದೇನೆ. ಇವುಗಳಲ್ಲಿ ಕೆಲವು 25ರಿಂದ 36 ಗಳ ಸುದೀರ್ಘವಾಗಿ ನಡೆದ ಯುದ್ಧಗಳಾಗಿತ್ತು ಎಂದು ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಉಲ್ಲೇಖಿಸಿದ ಡೊನಾಲ್ಡ್ ಟ್ರಂಪ್, ಎರಡೂ ದೇಶಗಳು ಯುದ್ಧ ನಡೆಸಲು ಸನ್ನದ್ಧವಾಗಿತ್ತು. 8 ಜೆಟ್‌ಗಳನ್ನು ಹೊಡೆದುರುಳಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ಮೊದಲು ಕೂಡ ಭಾರತ-ಪಾಕ್ ಸಂಘರ್ಷವನ್ನು ನಿಲ್ಲಿಸಿರುವ ಕುರಿತು ಟ್ರಂಪ್ ಹೇಳಿಕೆಯನ್ನು ನೀಡಿದ್ದರು. ಆದರೆ ಭಾರತವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಹೇಳಿಕೆಯನ್ನು ನಿರಾಕರಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News