×
Ad

ಗಾಝಾದಲ್ಲಿ 'ಮುಂದಿನ ವಾರದೊಳಗೆ' ಕದನ ವಿರಾಮ ಸಾಧ್ಯ ಎಂದ ಟ್ರಂಪ್

Update: 2025-06-28 11:01 IST

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Photo: PTI)

ವಾಷಿಂಗ್ಟನ್: ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಝಾದಲ್ಲಿ ಒಂದು ವಾರದೊಳಗೆ ಕದನ ವಿರಾಮ ಮಾತುಕತೆ ಅಂತಿಮ ಹಂತಕ್ಕೆ ತಲುಪಬಹುದು ಎಂದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಕದನ ವಿರಾಮ ಮಾತುಕತೆಗೆ ಅಂತಿಮ ಸ್ವರೂಪ ನೀಡಲು ಕೆಲವರೊಂದಿಗೆ ಮಾತನಾಡಿದ ನಂತರ ಈ ಕುರಿತು ತಾವು ಆಶಾದಾಯಕವಾಗಿರುವುದಾಗಿ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

ಕದನ ವಿರಾಮದ ಮಾತುಕತೆ ತಾರ್ಕಿಕ ಅಂತ್ಯಕ್ಕೆ ತಲುಪಿದೆ ಎಂದು ನಾನು ಭಾವಿಸುತ್ತೇನೆ. ಈ ಮಾತುಕತೆಯಲ್ಲಿ ಭಾಗಿಯಾಗಿರುವ ಕೆಲವು ಜನರೊಂದಿಗೆ ಮಾತನಾಡಿದ್ದೇನೆ" ಎಂದು ಟ್ರಂಪ್ ಹೇಳಿದ್ದಾರೆ

"ಮುಂದಿನ ವಾರದೊಳಗೆ ಕದನ ವಿರಾಮ ಘೋಷಣೆಯಾಗಬಹುದು ಎಂದು ಭಾವಿಸುತ್ತೇನೆ" ಎಂದು ಹೇಳಿದ ಡೊನಾಲ್ಡ್ ಟ್ರಂಪ್, ಅವರೊಂದಿಗೆ ಯಾರೆಲ್ಲಾ ಸಂಪರ್ಕದಲ್ಲಿದ್ದಾರೆ ಎಂಬ ವಿವರವನ್ನು ಬಹಿರಂಗಪಡಿಸಲು ನಿರಾಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News