×
Ad

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ಮಾಡಬೇಡಿ: ಇಸ್ರೇಲ್‌ಗೆ ಟ್ರಂಪ್ ಎಚ್ಚರಿಕೆ

Update: 2025-06-24 17:01 IST

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (PTI)

ವಾಶಿಂಗ್ಟನ್ : ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ಮಾಡಬೇಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್‌ಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಇರಾನ್ ಕದನ ವಿರಾಮ ಉಲ್ಲಂಘನೆ ಮಾಡಿ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ಗೆ ತೀವ್ರವಾಗಿ ಪ್ರತಿಕ್ರಿಯೆ ನೀಡುವಂತೆ ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ಮಿಲಿಟರಿ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದರ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ಮತ್ತೆ ದಾಳಿ ನಡೆಸದಂತೆ ಇಸ್ರೇಲ್‌ಗೆ ಕಠಿಣ ಪದಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.

ʼಇಸ್ರೇಲ್, ಬಾಂಬ್ ದಾಳಿ ನಡೆಸಬೇಡಿ. ನೀವು ಹಾಗೆ ಮಾಡಿದರೆ ಅದು ದೊಡ್ಡ ಉಲ್ಲಂಘನೆಯಾಗುತ್ತದೆ. ನಿಮ್ಮ ಪೈಲಟ್‌ಗಳನ್ನು ತಕ್ಷಣ ವಾಪಾಸ್ಸು ಕರೆಸಿಕೊಳ್ಳಿʼ ಎಂದು ಟ್ರಂಪ್ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News