×
Ad

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಟ್ರಂಪ್ ಎರಡು ವಾರಗಳಲ್ಲಿ ನಿರ್ಧರಿಸಲಿದ್ದಾರೆ: ಶ್ವೇತಭವನ

Update: 2025-06-19 23:48 IST

PC : Reuters

ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗಬೇಕೆ ಅಥವಾ ಬೇಡವೇ ಎಂಬುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಎರಡು ವಾರಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ.

ಟ್ರಂಪ್ ಅವರ ಸಂದೇಶವನ್ನು ಉಲ್ಲೇಖಿಸಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಲೀವಿಟ್ ಅವರು, “ಇರಾನ್ ಜೊತೆ ಮುಂದಿನ ದಿನಗಳಲ್ಲಿ ಮಾತುಕತೆಗಳು ನಡೆಯಬಹುದೇ ಅಥವಾ ಇಲ್ಲವೇ? ಮಾತುಕತೆಗೆ ಅವಕಾಶವಿದೆಯೇ ಎಂಬ ಅಂಶದ ಆಧಾರದ ಮೇಲೆ, ಮುಂದಿನ ಎರಡು ವಾರಗಳಲ್ಲಿ ನಿರ್ಧಾರವನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ” ಎಂದು ಹೇಳಿದರು.

"ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಪಡೆಯಲು ಹತ್ತಿರವಾಗಿಲ್ಲ" ಎಂಬುದನ್ನು ಅಮೆರಿಕ ಸರ್ಕಾರವು ಸಮರ್ಥಿಸಿಕೊಂಡಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಉಲ್ಲೇಖಿಸಿದ್ದಾರೆ.

ಇಸ್ರೇಲ್-ಇರಾನ್ ಸಂಘರ್ಷದಲ್ಲಿನ ಬೆಳವಣಿಗೆಗಳನ್ನು ಅಮೆರಿಕ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ವೀಕ್ಷಿಸುತ್ತಿದೆ. ಅಮೆರಿಕದ ಅಧ್ಯಕ್ಷರು ಗುಪ್ತಚರ ಇಲಾಖೆಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದರು. ಅಲ್ಲದೆ ರಾಷ್ಟ್ರೀಯ ಬದ್ರತಾ ಮಂಡಳಿಯು ಅವರಿಗೆ ಮಾಹಿತಿ ನೀಡುತ್ತಿದೆ. ಅವರು ನಮ್ಮ ಇಸ್ರೇಲಿ ಸಹವರ್ತಿಗಳೊಂದಿಗೆ, ವಿಶೇಷವಾಗಿ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಿರಂತರ ಸಂವಹನದಲ್ಲಿದ್ದಾರೆ ಎಂದು ಎಂದು ಲೀವಿಟ್ ಅವರು ಹೇಳಿದ್ದಾರೆ.

ಟ್ರಂಪ್ ಅವರು ಯಾವಾಗಲೂ ರಾಜತಾಂತ್ರಿಕತೆಯನ್ನು ಅನುಸರಿಸಲು ಬಯಸುತ್ತಾರೆ. ಅಗತ್ಯವಿದ್ದರೆ ಬಲವನ್ನು ಪ್ರಯೋಗಿಸಲು ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಲೀವಿಟ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News